Connect with us

Dvgsuddi Kannada | online news portal | Kannada news online

ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧ  

Election Commission

ರಾಷ್ಟ್ರ ಸುದ್ದಿ

ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಿದ್ಧ  

ನವದೆಹಲಿ:ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಸಿದ್ಧವಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

 ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಬೆನ್ನಲ್ಲೇ ಚುನಾವಣಾ ಆಯೋಗ ಈ ಹೇಳಿಕೆ ನೀಡಿದೆ. ಈ ಕುರಿತಂತೆ ಸುದ್ದಿಸಂಸ್ಥೆಯೊಂದಿಗೆ ಸಂದರ್ಶನದಲ್ಲಿ ಮಾತನಾಡಿದ ಸುಶೀಲ್ ಚಂದ್ರ ಅವರು,ಒಂದು ರಾಷ್ಟ್ರ ಒಂದು ಚುನಾವಣೆ ಉತ್ತಮ ಸಲಹೆಯಾಗಿದೆ. ಆದರೆ ಇದಕ್ಕೆ ಸಂವಿಧಾನದಲ್ಲಿ ಬದಲಾವಣೆಯ ಅಗತ್ಯವಿದೆ ಮತ್ತು ಅದನ್ನು ಸಂಸತ್ತಿನಲ್ಲಿ ನಿರ್ಧರಿಸಬೇಕು ಎಂದಿದ್ಧಾರೆ.

ಇದಕ್ಕೆ ಚುನಾವಣಾ ಆಯೋಗವು ಸಂಪೂರ್ಣ ಸನ್ನದ್ಧವಾಗಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸಲು ಸಮರ್ಥ್ಯವಿದೆ. ಸಂವಿಧಾನದ ಪ್ರಕಾರ ಎಲ್ಲ ಚುನಾವಣೆಗಳು ಏಕಕಾಲಕ್ಕೆ ನಡೆಯಬೇಕು.ಸ್ವಾತಂತ್ರ್ಯ ಬಂದಾಗಿನಿಂದ ನಡೆಯುತ್ತಿರುವ ಸಂಸತ್ ಚುನಾವಣೆಗಳು ಮೂರೂ ಚುನಾವಣೆಗಳು ಏಕಕಾಲಕ್ಕೆ ನಡೆಯುತ್ತವೆ. ನಂತರವೇ ಕೆಲವೊಮ್ಮೆ ವಿಧಾನಸಭೆ ವಿಸರ್ಜನೆಯಿಂದಾಗಿ ವೇಳಾಪಟ್ಟಿ ಬದಲಾಗುತ್ತವೆ.ಒಂದು ರಾಷ್ಟ್ರ ಒಂದು ಚುನಾವಣೆ ಉತ್ತಮ ಸಲಹೆಯಾಗಿದೆ. ಆದರೆ ಇದಕ್ಕೆ ಸಂವಿಧಾನದಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top