Connect with us

Dvgsuddi Kannada | online news portal | Kannada news online

ಜನ ಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಎಲ್ ಪಿಜಿ ಸಿಲಿಂಡರ್ ಬೆಲೆ 200 ರೂ, ಪೆಟ್ರೋಲ್ 9.5 ರೂ,‌ ಡೀಸೆಲ್ 7 ರೂ. ಇಳಿಕೆ

ಪ್ರಮುಖ ಸುದ್ದಿ

ಜನ ಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಎಲ್ ಪಿಜಿ ಸಿಲಿಂಡರ್ ಬೆಲೆ 200 ರೂ, ಪೆಟ್ರೋಲ್ 9.5 ರೂ,‌ ಡೀಸೆಲ್ 7 ರೂ. ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಜನ ಸಾಮಾನ್ಯರಿಗೆ ಸಿಹಿ ಸುದ್ದಿ ನೀಡಿದ್ದು, ಎಲ್ ಪಿ ಜಿ ಬೆಲೆ ಪ್ರತಿ ಸಿಲಿಂಡರ್ ಗೆ 200 ರೂ., ಪೆಟ್ರೋಲ್ 9.5, ರೂ. ಹಾಗೂ ಡೀಸೆಲ್ ಬೆಲೆ 7 ರೂ. ಇಳಿಕೆ‌ ಮಾಡಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ.ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ.ಇಳಿಕೆಯಾಗಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top