ನವದೆಹಲಿ: ಇಂಧನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಬೇಕೆಂಬ ಒತ್ತಾಯ ಎಲ್ಲ ಕಡೆಯಿಂದಲೂ ಕೇಳಿ ಬರುತ್ತಿದೆ.
ಪೆಟ್ರೋಲಿಯಂ ಉತ್ಪನ್ನಗಳ ತೆರಿಗೆ ಇಳಿಕೆ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿದ್ದು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ತೈಲಗಳ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡುವ ಕುರಿತಾಗಿ ಮಾತನಾಡಿದರು.ಜಾಗತಿಕ ಮಾರುಕಟ್ಟೆಗೆ ಅನುಗುಣವಾಗಿ ತೈಲ ಬೆಲೆ ಏರಿಕೆ, ಇಳಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದ ಸರ್ಕಾರಕ್ಕೆ ಆದಾಯ ಬರುತ್ತಿದೆ.ತೆರಿಗೆಯನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುವುದು. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2.50 ರೂಪಾಯಿ ತೆರಿಗೆ ಕಡಿತ ಮಾಡಲು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.



