ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ನಾಳೆಯೇ (ಅ. 5) ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. ಮಹಾರಾಷ್ಟ್ರಕ್ಕೆ ಪ್ರಧಾನಿಗಳು ನಾಳೆ ಭೇಟಿ ನೀಡಲಿದ್ದು, ನಾಳೆಯೇ ಪಿಎಂ ಕಿಸಾನ್ ಹಣ ಬಿಡುಗಡೆ ಹಾಗು ಇತರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ ನಾಳೆ ಪಿಎಂ ಕಿಸಾನ್ ಫಲಾನುಭವಿಗಳಿಗೆ ಒಟ್ಟು 20,000 ಕೋಟಿ ರೂ ಹಣ ಬಿಡುಗಡೆ ಆಗಲಿದೆ. 2019ರಲ್ಲಿ ಆರಂಭವಾದ ಈ ಯೋಜನೆ ಐದು ವರ್ಷದಲ್ಲಿ 3 ಲಕ್ಷ ಕೋಟಿಗೂ ಅಧಿಕ ಹಣವನ್ನು ಸರ್ಕಾರ ರೈತರ ಖಾತೆಗೆ ಹಾಕಿದೆ.
ಪಿಎಂ ಕಿಸಾನ್ ಯೋಜನೆಯಲ್ಲಿ ರೈತರಿಗೆ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು ಸಹಾಯಧನವಾಗಿ ನೀಡುತ್ತದೆ. 2,000 ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸ್ಕೀಮ್ನ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದೆಯಾ ಎಂದು ಚೆಕ್ ಮಾಡಲು ವೆಬ್ಸೈಟ್ pmkisan.gov.in ಭೇಟಿ ನೀಡಬಹುದು.



