ನವದೆಹಲಿ: ಗುರುವಾರ ನಿಧನ ಹೊಂದಿದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಂತಿಮ ನಮನ ಸಲ್ಲಿಸಿದರು.
ದೆಹಲಿಯ ರಾಮ್ ವಿಲಾಸ್ ಪಾಸ್ವಾನ್ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಧಾನಿಗೆ ಸಾಥ್ ನೀಡಿದರು. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಮುಖ ಗಣ್ಯರು ಪಾಸ್ವಾನ್ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.
Delhi: Prime Minister Narendra Modi pays last respects to Union Minister and LJP leader Ram Vilas Paswan at the latter's residence.
The LJP leader passed away yesterday. pic.twitter.com/b6Hd5U0RDw
— ANI (@ANI) October 9, 2020
ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿರ್ವಹಿಸುತ್ತಿದ್ದರು. ಸುಮಾರು 50 ವರ್ಷ ಸಕ್ರಿಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ದೇಶದ ಪ್ರಮುಖ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು.