Connect with us

Dvg Suddi-Kannada News

ರಾಮ್ ವಿಲಾಸ್ ಪಾಸ್ವಾನ್ ಗೆ  ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ರಾಷ್ಟ್ರ ಸುದ್ದಿ

ರಾಮ್ ವಿಲಾಸ್ ಪಾಸ್ವಾನ್ ಗೆ  ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಗುರುವಾರ ನಿಧನ ಹೊಂದಿದ ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್ ಅವರಿಗೆ ಪ್ರಧಾನಿ ನರೇಂದ್ರ  ಮೋದಿ ಅಂತಿಮ ನಮನ ಸಲ್ಲಿಸಿದರು.

ದೆಹಲಿಯ ರಾಮ್‌ ವಿಲಾಸ್‌ ಪಾಸ್ವಾನ್‌ ನಿವಾಸಕ್ಕೆ ತೆರಳಿದ ಮೋದಿ ಪಾಸ್ವಾನ್‌ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಧಾನಿಗೆ ಸಾಥ್ ನೀಡಿದರು. ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪ್ರಮುಖ ಗಣ್ಯರು ಪಾಸ್ವಾನ್‌ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.

ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ನಿರ್ವಹಿಸುತ್ತಿದ್ದರು. ಸುಮಾರು 50 ವರ್ಷ ಸಕ್ರಿಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು.  ದೇಶದ ಪ್ರಮುಖ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು.

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top