Connect with us

Dvgsuddi Kannada | online news portal | Kannada news online

ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹಾಕಿದ ಆರೋಗ್ಯ ಸಿಬ್ಬಂದಿ

ರಾಷ್ಟ್ರ ಸುದ್ದಿ

ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್ ಹಾಕಿದ ಆರೋಗ್ಯ ಸಿಬ್ಬಂದಿ

ಯವತ್ಮಾಲ್: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದ ಪರಿಣಾಮ 12 ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹನಿಗಳನ್ನು ಹಾಕಿದ ಘಟನೆ ನಡೆದಿದೆ.

ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಒಂದು ಮಗು ವಾತಿ ಮಾಡಿಕೊಂಡಿದೆ. ಎಲ್ಲ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಪ್ಸಿಕೊಪ್ರಿ ಗ್ರಾಮದ ಭನ್ಬೋರಾ ಆರೋಗ್ಯ ಕೇಂದ್ರದಲ್ಲಿ ಭಾನುವಾರ 1-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ವ್ಯಾಕ್ಸಿನೇಷನ್ ಹಾಕಲಾಗುತ್ತಿತ್ತು.

ಘಟನೆಗೆ ಕುರಿತು ತನಿಖೆ ನಡೆಯುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಮೂವರು ಆರೋಗ್ಯ ಕಾರ್ಯಕರ್ತರನ್ನು ಅಮಾನತು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top