Connect with us

Dvgsuddi Kannada | online news portal | Kannada news online

ಇಂಡಿಯನ್ ಪೋಸ್ಟಲ್ ಇಲಾಖೆಯಲ್ಲಿ 1,137 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಇಂಡಿಯನ್ ಪೋಸ್ಟಲ್ ಇಲಾಖೆಯಲ್ಲಿ 1,137 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಇಂಡಿಯನ್ ಪೋಸ್ಟಲ್ ಇಲಾಖೆಯಲ್ಲಿ ಖಾಲಿ ಇರುವ 1,137 ಬಿಪಿಎಂ, ಎಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.  ಮಾರ್ಚ್‌ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ಬಿಪಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000 ರೂ ವೇತನ ಸಿಗಲಿದೆ. ಎಬಿಪಿಎಂ/ದಖ್ ಸೇವಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ರೂ ವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಯನ್ನ ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:ಓಸಿ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ/ಮಹಿಳೆ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆದರೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಹೆಚ್ಚಿನ ಮಾಹಿತಿಗೆ  ಅಧಿಕೃತ ವೆಬ್‌ಸೈಟ್​ಗೆ http://www.appost.in/gdsonline/home.aspx ಭೇಟಿ ನೀಡಿ. ಅರ್ಜಿ ಸಲ್ಲಿಸಲು  ಏಪ್ರಿಲ್ 7 ಕೊನೆಯ ದಿನವಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top