Connect with us

Dvg Suddi-Kannada News

ಪಡಿತರ ಕಾರ್ಡ್ ದಾರರಿಗೆ ‘ಸಿಹಿ ಸುದ್ದಿ’; ಇನ್ಮುಂದೆ ದೇಶದ ಯಾವುದೇ ಪ್ರದೇಶದಲ್ಲಿ ರೇಷನ್ ಪಡೆಯಬಹುದು..!

ಪ್ರಮುಖ ಸುದ್ದಿ

ಪಡಿತರ ಕಾರ್ಡ್ ದಾರರಿಗೆ ‘ಸಿಹಿ ಸುದ್ದಿ’; ಇನ್ಮುಂದೆ ದೇಶದ ಯಾವುದೇ ಪ್ರದೇಶದಲ್ಲಿ ರೇಷನ್ ಪಡೆಯಬಹುದು..!

ನವದೆಹಲಿ: ಏಕ ದೇಶ, ಏಕ ಪಡಿತರ ಚೀಟಿ ಯೋಜನೆಯನ್ನು ರೂಪಿಸಿರುವ ಕೇಂದ್ರ ಸರ್ಕಾರ ಈಗ ‘ಮೇರಾ ರೇಶನ್‌ ಕಾರ್ಡ್‌’ (ನನ್ನ ಪಡಿತರ ಚೀಟಿ) ಎಂಬ ಮೊಬೈಲ್‌ ಆ್ಯಪ್ ಬಿಡುಗಡೆ ಮಾಡಿದೆ.

ಒಂದೇ ಪಡಿತರ ಚೀಟಿ ಇಟ್ಟುಕೊಂಡು ದೇಶದ ಯಾವುದೇ ಭಾಗದಲ್ಲಿ ಬೇಕಾದ್ರೂ ಪಡಿತರ ಪಡೆಯುವ ಯೋಜನೆ ಇದಾಗಿದೆ. ವಿಶೇಷವಾಗಿ ರಾಜ್ಯದಿಂದ ರಾಜ್ಯಗಳಿಗೆ ವಲಸೆ ಹೋಗುವ ವಲಸಿಗರಿಗೆ ಈ ಆಯಪ್‌ನಿಂದ ನೆರವಾಗಲಿದ್ದು, ಸಮೀಪದ ರೇಶನ್‌ ಅಂಗಡಿಯನ್ನು ಆ್ಯಪ್‌ ಮೂಲಕ ಸುಲಭವಾಗಿ ಗುರುತಿಸಬಹುದಾಗಿದೆ.

ಈ ಕುರಿತಂತೆ ಬಿಡುಗಡೆ ಮಾಡಲಾಗಿರುವ ಆ್ಯಪ್ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಲಭ್ಯವಿದೆ. ಶೀಘ್ರದಲ್ಲೇ 14 ಭಾಷೆಗಳಲ್ಲಿ ಲಭ್ಯವಾಗಲಿದೆ. ವಲಸಿಗರು ಹೆಚ್ಚು ಎಲ್ಲಿದ್ದಾರೆ ಎಂದು ಗುರುತಿಸಿ ಭಾಷೆಗಳನ್ನು ನಿರ್ಧರಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಕೇಂದ್ರ ಸರ್ಕಾರವು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 81 ಕೋಟಿ ಜನರಿಗೆ ರಿಯಾಯಿತಿ ದರದಲ್ಲಿ ನಾನಾ ರೀತಿಯ ಆಹಾರ ಧಾನ್ಯಗಳನ್ನು ವಿತರಿಸುತ್ತದೆ. ಆದರೆ ವಲಸೆ ಕಾರ್ಮಿಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ತೆರಳಿದಾಗ ಪಡಿತರ ಪಡೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲೆಂದೇ ಯಾವುದೇ ವಲಸಿಗ ವ್ಯಕ್ತಿ ದೇಶದ ಯಾವುದೇ ಪಡಿತರ ಅಂಗಡಿಯಿಂದ ಅಗತ್ಯವಿರುವ ಪಡಿತರ ಪಡೆಯಲು ಒಂದು ದೇಶ, ಒಂದು ಪಡಿತರ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ.

ಹೇಗೆ ಕಾರ್ಯ ನಿರ್ವಹಿಸುತ್ತೇ: ಈ ಆ್ಯಪ್ ಮೂಲಕ ಸಮೀಪದ ರೇಶನ್‌ ಅಂಗಡಿ ಎಲ್ಲಿದೆ..?. ಅಲ್ಲಿ ಯಾವ ಧಾನ್ಯ ಸಿಗಲಿವೆ..? ಇತ್ತೀಚಿನ ವಹಿವಾಟು, ಆಧಾರ್‌ ಸಂಯೋಜನೆ ಮಾಹಿತಿ ಲಭ್ಯವಿರುತ್ತದೆ. ವಲಸಿಗರು ತಮ್ಮ ವಿವರವನ್ನು ಆ್ಯಪ್ ಮೂಲಕ ನೀಡಿ ರೇಷನ್ ಪಡೆಯಬಹುದು.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top