Connect with us

Dvgsuddi Kannada | online news portal | Kannada news online

ಮತ್ತೆ ಶಿವಸೇನಾ ಕ್ಯಾತೆ; ಬೆಳಗಾವಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವಂತೆ ಒತ್ತಾಯ

ರಾಷ್ಟ್ರ ಸುದ್ದಿ

ಮತ್ತೆ ಶಿವಸೇನಾ ಕ್ಯಾತೆ; ಬೆಳಗಾವಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವಂತೆ ಒತ್ತಾಯ

ಮುಂಬೈ: ಬೆಳಗಾವಿ ಮರಾಠಿ ಭಾಷಿಕರ ಮೇಲೆ ಕನ್ನಡಿಗರ ದೌರ್ಜನ್ಯ ನಡೆಯುತ್ತಿದೆ.  ಈ ಹಿನ್ನೆಲೆಯಲ್ಲಿ  ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಶಿವಸೇನಾ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.

ಬೆಳಗಾವಿಯಲ್ಲಿ ಮರಾಠಿ ಮಾತನಾಡುವವರ ಮೇಲೆ ಕನ್ನಡಪರ ಸಂಘಟನೆಗಳು  ಹಲ್ಲೆ ಮಾಡಿದ್ದಾರೆ.  ಮರಾಠಿ ಫಲಕಗಳನ್ನು ಕಿತ್ತೆಸೆದಿದ್ದಾರೆ. ಇದು ಮರಾಠಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಸಂಪಾದಕೀಯದಲ್ಲಿ ಟೀಕಿಸಿದ್ಧಾರೆ.

ಕರ್ನಾಟಕ ಪೊಲೀಸರು, ಸ್ಥಳೀಯರು,  ಆಡಳಿತಾರೂಢ ಬಿಜೆಪಿ ಸರ್ಕಾರ ಇಂಥ ದುಷ್ಕೃತ್ಯಗಳನ್ನು ಬೆಂಬಲಿಸುತ್ತಿದೆ. ಮಹಾರಾಷ್ಟ್ರದಲ್ಲಿ ಪರಭಾಷಿಕರೊಂದಿಗೆ ಮರಾಠಿಗರು ಎಂದಿಗೂ ಕೆಟ್ಟದಾಗಿ ನಡೆದುಕೊಂಡಿಲ್ಲ. ಇಂದೋರ್‌, ವಡೋದರಾ ನಗರಗಳಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಮರಾಠಿಗರು ಇದ್ದಾರೆ. ಆದರೆ, ಅವರು ಎಂದಿಗೂ ಸ್ಥಳೀಯರೊಂದಿಗೆ ಸಂಘರ್ಷ ಎದುರಿಸಿಲ್ಲ ಎಂದಿದ್ದಾರೆ.ಈ ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌, ಕರ್ನಾಟಕದ ಮುಖ್ಯಮಂತ್ರಿ, ಕೇಂದ್ರದ ಸಚಿವರೊಂದಿಗೆ ಚರ್ಚಿಸಬೇಕು ಎಂದಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top