Connect with us

Dvgsuddi Kannada | online news portal | Kannada news online

ಜಮ್ಮು-ಕಾಶ್ಮೀರ 370 ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಪ್ರಮುಖ ಸುದ್ದಿ

ಜಮ್ಮು-ಕಾಶ್ಮೀರ 370 ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಸಂವಿಧಾನದ ಆರ್ಟಿಕಲ್ 370 ನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸಲು ಅಧಿಕಾರಿ ಇದೆ ಎಂದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.ದೇಶದ ಎಲ್ಲಾ ರಾಜ್ಯಗಳು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿವೆ.ಸಂವಿಧಾನ ವಿಧಿ 371ರಿಂದ ಜೆವರೆಗೆ ವಿವಿಧ ರಾಜ್ಯಗಳ ವಿಶೇಷ ವ್ಯವಸ್ಥೆಗಳ ಉದಾಹರಣೆಗಳಾಗಿವೆ. ಹೀಗಾಗಿ ಜಮ್ಮು ಮತ್ತು ಕಾಶ್ಮೀರವು ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ. ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು. ಹೀಗಾಗಿ ಆರ್ಟಿಕಲ್ 370 ಒಂದು ತಾತ್ಕಾಲಿಕ ನಿಬಂಧನೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮಧ್ಯಂತರ ಪ್ರಕ್ರಿಯೆಯನ್ನು ಪೂರೈಸಲು ಪರಿವರ್ತನಾ ಉದ್ದೇಶವನ್ನು ಪೂರೈಸಲು ಇದನ್ನು ಪರಿಚಯಿಸಲಾಗಿದೆ. ಇದು ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಗಳ ಕಾರಣದಿಂದಾಗಿ ತಾತ್ಕಾಲಿಕ ಉದ್ದೇಶಕ್ಕಾಗಿತ್ತು. ಹೀಗಾಗಿ ಇದು ಸಂವಿಧಾನದ ಭಾಗ 21 ರಲ್ಲಿ ಇರಿಸಲಾಗಿದೆ. ಆರ್ಟಿಕಲ್ 370 ಅಸ್ತಿತ್ವದಲ್ಲಿಲ್ಲ ಎಂದು ಅಧಿಸೂಚನೆಯನ್ನು ಹೊರಡಿಸುವ ರಾಷ್ಟ್ರಪತಿಗಳ ಅಧಿಕಾರವು ಜಮ್ಮು-ಕಾಶ್ಮೀರ ಸಂವಿಧಾನ ಸಭೆಯ ವಿಸರ್ಜನೆಯ ನಂತರವೂ ಅಸ್ತಿತ್ವದಲ್ಲಿದೆ ಸುಪ್ರಿಂ ಕೋರ್ಟ್ ಪ್ರಕಟಿಸಿದೆ.

ಈ ಮೂಲಕ ಕೇಂದ್ರ ಸರ್ಕಾರಕ್ಕೆ ಸಂವಿಧಾನ ವಿಧಿ 370 ರದ್ದತಿಯಲ್ಲಿ ಜಯ ಸಿಕ್ಕಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಕ್ಕಿದ್ದು, 2024ರ ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top