ನವದೆಹಲಿ: ತಿಂಗಳ ಮೊದಲ ದಿನವೇ ಗ್ಯಾಸ್ ಸಿಲಿಂಡರ್ ಬಳಕೆಯ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, 19 ಕೆಜಿ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಬೆಲೆ 171.50 ರೂ.ಗೆ ಇಳಿಕೆಯಾಗಿದೆ. ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2028 ರೂಪಾಯಿ ಇತ್ತು. ಇದೀಗ ಇಳಿಕೆ ನಂತರ 1856.50 ರೂ. ಆಗಿದೆ.
ಇಂದಿನಿಂದ (ಮೇ. 1) 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 171.50 ರೂ.ಗೆ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,856.50 ರೂ.ಇದೆ. ದರ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರವಾಗಿದೆ. ಗೃಹ ಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ.
ವಾಣಿಜ್ಯ ಗ್ಯಾಸ್ ಸಿಲಿಂಡರ್ ಗಳ ಬೆಲೆ 171.5 ರೂ.ಗೆ ಇಳಿಕೆ ನಂತರ, ದೇಶದ ರಾಜಧಾನಿ ದೆಹಲಿಯಲ್ಲಿ ಬೆಲೆ 1856.50 ರೂ., ಕೋಲ್ಕತ್ತಾದಲ್ಲಿ 1960.50 ರೂ., ಮುಂಬೈನಲ್ಲಿ 1808.50 ರೂ.ಗೆ ಇಳಿಕೆಯಾಗಿದೆ.



