ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಜುಲೈ 23) ಕೇಂದ್ರ ಬಜೆಟ್ 2024 25 ( 2024 25) ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಬಾರಿ ವಿತ್ತ ಸಚಿವರು ಕೃಷಿ ಕ್ಷೇತ್ರಕ್ಕೆ 1.52 ಲಕ್ಷ ಕೋಟಿ ರೂಪಾಯಿ ಅನುದಾನ ಹಂಚಿಕೆಯನ್ನು ಮಾಡುತ್ತಿರುವುದಾಗಿ ಘೋಷಿಸಿದರು.
ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ & ಮಧ್ಯಮ ಕೈಗಾರಿಕೆಗಳಿಗೆ ಪೂರಕವಾಗಿದೆ. ಕೃಷಿ ಸಂಶೋಧನೆ ಸುಧಾರಣೆಗೆ ಕ್ರಮಕೈಗೊಳ್ಳೋದಾಗಿ ಹೇಳಿದ ಅವರು, 10 ಸಾವಿರ ಬಯೋರಿಸರ್ಚ್ ಸೆಂಟರ್ ಸ್ಥಾಪನೆ ಮಾಡುವುದಾಗಿ ಹೇಳಿದರು.ದೇಶದ 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ ನಡೆಸೋದಾಗಿ ತಿಳಿಸಿದರು.
5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ನಿರ್ಧಾರವನ್ನು ಈ ಬಜೆಟ್ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ. ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್ನಲ್ಲಿ ಉಲ್ಲೇಖಿಸಿದ್ದಾರೆ. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ, ಮಾರುಕಟ್ಟೆಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.
ತೋಟಗಾರಿಕೆ ಬೆಳೆಗಳಿಗೆ ಹೊಸ 109 ಅಧಿಕ ಇಳುವರಿ, ಹವಾಮಾನ ಸ್ಥಿತಿಸ್ಥಾಪಕ ಬೀಜಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ಕೃಷಿ ಕ್ಷೇತ್ರದ ಆಟೋಮೊಬೈಲ್‌ಗಳಿಗೆ – ವಿಶೇಷವಾಗಿ ಆರಂಭಿಕ ಮಟ್ಟದ ದ್ವಿಚಕ್ರ ವಾಹನಗಳು ಮತ್ತು ಟ್ರಾಕ್ಟರ್‌ಗಳಿಗೆ ಸಂಬಂಧಿಸಿದ ಗ್ರಾಮೀಣರ ಬೇಡಿಕೆಗೆ ಇದು ನೆರವಾಗಲಿದೆ .