ನವದೆಹಲಿ: ಸಂಸತ್ ಭವನದ ಭದ್ರತೆಯಲ್ಲಿ ಭದ್ರತಾ ಲೋಪವಾಗಿರುವ ಘಟನೆ ಇಂದು ನಡೆದಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದಾಗ ಸಂದರ್ಶಕರ ಗ್ಯಾಲರಿಯಲ್ಲಿ ಕುಳಿತಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ದಿಢೀರನೆ ಸದನಕ್ಕೆ ಹಾರಿ ಅವಾಂತರ ಸೃಷ್ಟಿಸಿ ಭಯದ ವಾತಾವರಣ ನಿರ್ಮಾಣ ಮಾಡಿದರು. ಆರೋಪಿಗಳನ್ನು ಈಗಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಆರೋಪಿಗಳಿಗೆ ಪಾಸ್ ಸಿಕ್ಕಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ಘಟನೆಗೆ ಕಾರಣ ಏನು..? ಆರೋಪಿಗಳು ಯಾರು ಎಂಬುದು ವಿಚಾರಣೆ ಬಳಿಕ ಗೊತ್ತಾಗಲಿದೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷ. ಇದೇ ದಿನ ಲೋಕಸಭೆಯಲ್ಲಿ ಭದ್ರತಾಲೋಪ ಸಂಭವಿಸಿದದೆ. ಅನಿಲ ಹೊರಸೂಸುವ ವಸ್ತು ಎಸೆದರು ಕೂಡಲೇ ಭದ್ರತಾ ಸಿಬ್ಬಂದಿಗಳು ಹೊರಗೆ ಎಳೆದು ತಂದಿದ್ದಾರೆ. ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಓರ್ವ ಪುರುಷ ಮತ್ತು ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ನೀಲಂ (42) ಮತ್ತು ಅಮೋಲ್ ಶಿಂಧೆ (25) ಎಂದು ಗುರುತಿಸಲಾಗಿದೆ.
ಈ ಆರೋಪಿಗಳು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಆಫೀಸ್ನಿಂದ ಪಾಸ್ ಪಡೆದು ಸಂಸತ್ ಭವನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರತಾಪ್ ಸಿಂಹ ಕಛೇರಿಯಿಂದ ಹೇಗೆ ಪಾಸ್ ಪಡೆದಿದ್ದರು. ಇವರ ಇಬ್ಬರ ಉದ್ದೇಶ ಏನಾಗಿತ್ತು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಾಗಿದೆ.



