Connect with us

Dvgsuddi Kannada | online news portal | Kannada news online

ಮಹಿಳೆ ದಿನಾಚರಣೆ ಅಂಗವಾಗಿ ಎಲ್‍ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿದ ಕೇಂದ್ರ ಸರ್ಕಾರ

ಪ್ರಮುಖ ಸುದ್ದಿ

ಮಹಿಳೆ ದಿನಾಚರಣೆ ಅಂಗವಾಗಿ ಎಲ್‍ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಇಂದಿನ (ಮಾ.8) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್‌ ನೀಡಿದ್ದು, ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತಗೊಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ಎಲ್ ಪಿ ಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡುವುದಾಗಿ ತಿಳಸಿದ್ದಾರೆ.

ಮಹಿಳೆಯರ ಸಬಲೀಕರಣಕ್ಕಾಗಿ ಈ ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ. ಇದರಿಂದ ಲಕ್ಷಾಂತರ ಕುಟುಂಬಗಳ ಆರ್ಥಿಕ ಹೊರೆ ತಕ್ಕ ಮಟ್ಟಿಗೆ ಕಡಿಮೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ.ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧಾರ ಕೈಗೊಂಡಿತ್ತು. ಇದೀಗ ಎಲ್ಲಾ ಸಾಮಾನ್ಯ ಸಿಲಿಂಡರ್ ಗ್ರಾಹಕರಿಗೆ ಪ್ರತಿ ಸಿಲಿಂಡರ್ ಗೆ 100 ರೂ. ದರ ಇಳಿಕೆ ಅನ್ವಯವಾಗಲಿದೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಸುಮಾರು 32.5 ಕೋಟಿ ಎಲ್‍ಪಿಜಿ ಸಂಪರ್ಕಗಳಿವೆ. ಇದರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ಸುಮಾರು 10.25 ಕೋಟಿ ಸಿಲಿಂಡರ್‍ಗಳನ್ನು ವಿತರಣೆ ಮಾಡಲಾಗಿದೆ.

ಮಾರ್ಚ್ 1ರಂದು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳಲ್ಲಿ ಪರಿಷ್ಕರಣೆ ಮಾಡಿರಲ್ಲ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top