Connect with us

Dvgsuddi Kannada | online news portal | Kannada news online

6 ತಾಲ್ಲೂಕು ಒಳಗೊಂಡ ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಪ್ರಮುಖ ಸುದ್ದಿ

6 ತಾಲ್ಲೂಕು ಒಳಗೊಂಡ ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: 6 ತಾಲೂಕುಗಳನ್ನು ಒಳಗೊಂಡ ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದ್ದು, ಇಂದು ನಡೆದ  ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.   ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಆಗಲಿದ್ದು,  ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದೆ.

ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ತೀರ್ಮಾನ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ.

ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ. ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top