ಬೆಳಗಾವಿ : ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದೆ.
ಕೊರೊನಾ ಎರಡನೇ ಅಲೆ ಹಿನ್ನೆಲೆ ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಹೊಸ ವರ್ಷದ ಆಚರಣೆಗೆ ಬ್ರೇಕ್ ಹಾಕುವಂತೆ ಸಲಹೆ ನೀಡಿತ್ತು. ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಈ ಬಾರಿ ಪ್ರತಿ ವರ್ಷ ಆಚರಣೆಯಂತೆ ಸಂಭ್ರಮದಿಂದ ಹೊಸ ವರ್ಷ ಆಚರಣೆ ಮಾಡುವಂತಿಲ್ಲ. ಕೊರೊನಾ ಸೋಂಕಿನ ಕಾರಣದಿಂದಾಗಿ ಸಿಎಂ ಜೊತೆಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನ ಬ್ರಿಗೇಡ್ ರಸ್ತೆ, ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿಲ್ಲ. ಹೊಟೇಲ್ ಗಳಲ್ಲಿಯೂ ಸರಳವಾಗಿ ಹೊಸ ವರ್ಷ ಆಚರಿಸಲು ಅವಕಾಶ ನೀಡಲಾಗಿದೆ. ಶೀಘ್ರವೇ ಹೊಸ ವರ್ಷ ಆಚರಣೆಯ ಕುರಿತಂತೆ ಮಾರ್ಗಸೂಚಿಯನ್ನು ಕೂಡ ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು. ಈ ಮೂಲಕ ಹೊಸ ವರ್ಷದ ಆಚರಣೆ ಮಾಡುವ ಖುಷಿಯಲ್ಲಿದ್ದವರಿಗೂ ಶಾಕ್ ನೀಡದ್ದಾರೆ.



