ಡಿ.24 ರಂದು ದಾವಣಗೆರೆಯಲ್ಲಿ ಯುವಜಯೋತ್ಸವ ಸ್ಪರ್ಧೆಗೆ ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ : 2020-21ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಸ್ಪರ್ಧೆಗಳನ್ನು ನಗರದ ಕ್ರೀಡಾ ವಸತಿ ನಿಲಯದಲ್ಲಿ ಡಿ.24 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.ಈ ಯುವಜನೋತ್ಸವ ಆಯ್ಕೆ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಈ ಕೆಳಕಂಡ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, 15 ರಿಂದ 29 ವರ್ಷ ವಯೋಮಾನದೊಳಗಿನ ಎಲ್ಲಾ ಯುವಜನರು ಭಾಗವಹಿಸಬಹುದು.

ಭಾಗವಹಿಸುವ ಸ್ಪರ್ಧಾಳುಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ತರತಕ್ಕದ್ದು. ಇಲ್ಲದೇ ಇದ್ದ ಪಕ್ಷದಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ ಹಾಗೂ ಕೋವಿಡ್-19 ನಿಯಮಗಳನ್ವಯ ಸ್ಪರ್ಧಾಳುಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಯುವಜನೋತ್ಸವ ಕಾರ್ಯಕ್ರಮದಲ್ಲಿ ಗುಂಪು ಸ್ಪರ್ಧೆಗಳ ವಿಭಾಗದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ವೈಯುಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಏಕಾಂಕ ನಾಟಕ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭರತ ನಾಟ್ಯ, ಒಡಿಸ್ಸಿ, ಮಣಿಪುರಿ, ಕುಚುಪುಡಿ, ಕಥಕ್, ಸಿತಾರ, ಕೊಳಲು, ತಬಲಾ, ವೀಣಾ, ಮೃದಂಗ, ಹಾರ್ಮೋನಿಯಂ, ಗಿಟಾರ್, ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಆಶುಭಾಷಣ ಸ್ಪರ್ಧೆಗಳನ್ನು ನಡೆಸಲಾಗುವುದು. ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.

ಆಯ್ಕೆಯಾದವರು ರಾಜ್ಯಮಟ್ಟದ ಯುವಜನೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಭಾಗವಹಿಸುವ ಸ್ಪರ್ಧಾಳುಗಳು ಡಿ.24 ರಂದು ಬೆಳಿಗ್ಗೆ 9.30 ಕ್ಕೆ ಕ್ರೀಡಾ ವಸತಿ ನಿಲಯ, ವಿದ್ಯಾನಗರ ರಸ್ತೆ, ದಾವಣಗೆರೆ ಇಲ್ಲಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಿ.ಆರ್.ಎಂ. ವಿಜ್ಞಾನ ಕಾಲೇಜು ಎದುರು, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *