Connect with us

Dvgsuddi Kannada | online news portal | Kannada news online

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಸರ್ಕಾರ  

ಅಂತರಾಷ್ಟ್ರೀಯ ಸುದ್ದಿ

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಸರ್ಕಾರ  

ಇಸ್ಲಾಮಾಬಾದ್‌: ಅಕ್ರಮ ಭೂ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಬಂಧನಕ್ಕೆ ಪಾಕಿಸ್ತಾನ ಸರ್ಕಾರ ವಾರಂಟ್‌ ಹೊರಡಿಸಿದೆ.

70 ವರ್ಷ ವಯಸ್ಸಿನ ಷರೀಫ್‌, ಲಂಡನ್‌ನಲ್ಲಿ ನೆಲೆಸಿದ್ದಾರೆ. ವಿದೇಶದಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಷರೀಫ್‌ ಮಾಡಿಕೊಂಡಿದ್ದ ಮನವಿಯನ್ನು ಲಾಹೋರ್‌ ಹೈಕೋರ್ಟ್‌ ಪುರಸ್ಕರಿಸಿತ್ತು. ನಾಲ್ಕು ವಾರಗಳ ಕಾಲ ವಿದೇಶದಲ್ಲಿರಲು ಅನುಮತಿ ಲಭಿಸಿದ್ದರಿಂದ ಕಳೆದ ವರ್ಷದ ನವೆಂಬರ್‌ನಲ್ಲಿ ಷರೀಫ್‌, ಲಂಡನ್‌ಗೆ ಪ್ರಯಾಣ ಬೆಳೆಸಿದ್ದರು.

ನವಾಜ್‌, ಅವರ ಪುತ್ರಿ ಮರಿಯಂ ಹಾಗೂ ಅಳಿಯ ಮಹಮ್ಮದ್‌ ಸಫ್ದಾರ್‌ ಅವರು ಅಕ್ರಮ ಭೂ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.ಷರೀಫ್‌ ಬಂಧನಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರವು ಹೊರಡಿಸಿರುವ ವಾರಂಟ್,‌ ಲಂಡನ್‌ನಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ಗೆ ಗುರುವಾರವೇ ತಲುಪಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

To Top