ಚಿತ್ರದುರ್ಗ: ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಬದಲಿಗೆ ಬಸವೇಶ್ವರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಬೇಕು ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಅಂಬೇಡ್ಕರ್, ಬಾಬು ಜಗಜೀವನರಾಂ, ಅಭಿವೃದ್ದಿ ನಿಗಮಗಳನ್ನು ಸ್ಥಾಪಿಸಿದೆ. ಅದರಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ಸ್ಥಾಪಿಸಲು ಮುಂದಾಗಿದ್ದು, ಇದಕ್ಕೆ ಬಸವೇಶ್ವರ ಅಭಿವೃದ್ದಿ ನಿಗಮ ಎಂದು ಹೆಸರಿಡಬೇಕು. ಇದಕ್ಕೆ ಸಾವಿರಾರು ಕೋಟಿ ಅನುದಾನ ನೀಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿರುವ ಲಿಂಗಾಯಿತರಿಗೆ ಶೇ. 16 % ಮೀಸಲಾತಿ ಕೊಡಬೇಕು. ಲಿಂಗಾಯಿತ ಧರ್ಮಕ್ಕೆ ಪ್ರತ್ಯೇಕ ಧರ್ಮ ಎಂದು ಮಾನ್ಯತೆ ಸಿಗುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು. ಅಭಿವೃದ್ಧಿ ನಿಗಮಗಳು ಚುನಾವಣೆಯ ಗಿಮಿಕ್ ಆಗಬಾರದು. ನಿಜವಾದ ಬಡವರಿಗೆ ಸಂತ್ರಸ್ತರಿಗೆ ಸೌಲಭ್ಯಗಳು ಸಿಗುವಂತಾಗಬೇಕು. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವವರಿಗೆ ಮೀಸಲಾತಿ ಸಿಗಬೇಕು. ಇತ್ತೀಚಿಗೆ ಎಲ್ಲರೂ ಮೀಸಲಾತಿ ಕೇಳುತ್ತಿರುವುದು ವಿಷಾಧನೀಯ ಎಂದು ಹೇಳಿದರು.