Connect with us

Dvgsuddi Kannada | online news portal | Kannada news online

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸಿಎಪಿಎಫ್,  ಎಸ್.ಐ 4,300 ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸಿಎಪಿಎಫ್,  ಎಸ್.ಐ 4,300 ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಸಬ್‍ ಇನ್ಸ್ ಪೆಕ್ಟರ್ (ಎಸ್.ಐ) ಒಟ್ಟು 4300 (ಪುರುಷ-4019 & ಮಹಿಳೆ-281) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ.

ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿದಾರರು ವೆಬ್‍ಸೈಟ್ ಮೂಲಕ www.ssckkr.kar.nic.in & https://ssc.nic.in ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆಗಸ್ಟ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ ಮತ್ತು ಅಭ್ಯರ್ಥಿಗಳಿಗೆ 20 ರಿಂದ 25 ವಯೋಮಾನದಾವರಾಗಿರಬೇಕು. ಎಸ್‍ಸಿ/ಎಸ್‍ಟಿ/ಇಎಸ್‍ಎಂ/ಓಬಿಸಿ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 / 9483862020, ದೂರವಾಣಿ ಸಂಖ್ಯೆ 08192-259446 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ ಇವರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top