Connect with us

Dvgsuddi Kannada | online news portal | Kannada news online

ಮುನಿರತ್ನ ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ: ಸಚಿವ ಎಸ್. ಟಿ. ಸೋಮಶೇಖರ್

ರಾಜಕೀಯ

ಮುನಿರತ್ನ ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಕೆ: ಸಚಿವ ಎಸ್. ಟಿ. ಸೋಮಶೇಖರ್

ಡಿವಿಜಿ ಸುದ್ದಿ, ಬೆಂಗಳೂರು:  ರಾಜರಾಜೇಶ್ವರಿ ಕ್ಷೇತ್ರ ಉಪ ಚುನಾವಣೆಗೆ  ನಾಳೆ ಬೆಳಗ್ಗೆ 11ಗಂಟೆಗೆ ಮುನಿರತ್ನ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಹಕಾರ ಖಾತೆಯ ಸಚಿವ ಎಸ್‌ಟಿ ಸೋಮಶೇಖರ್‌ ಹೇಳಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ9.30ಕ್ಕೆ ಮುನಿರತ್ನ ಅವರನ್ನು ಪಕ್ಷದ ಕಚೇರಿಗೆ ಬರಲು ಹೇಳಿದ್ದಾರೆ. 11 ಗಂಟೆಗೆ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ಸಿಎಂ ಯಡಿಯೂರಪ್ಪನವರೇ ಈ ಬಗ್ಗೆ ಅಧಿಕೃತವಾಗಿ ತಿಳಿಸುತ್ತಾರೆ. ಅಭ್ಯರ್ಥಿ ವಿಚಾರವಾಗಿ ಯಾವುದೇ ಗೊಂದಲ ಇಲ್ಲ ಎಂದರು.

ಈ ವಿಚಾರದ ಬಗ್ಗೆ ಮುನಿರತ್ನ ಪ್ರತಿಕ್ರಿಯಿಸಿ, ಎಸ್.ಟಿ.ಸೋಮಶೇಖರ್ ಹೇಳಿಕೆಯ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ. ಪಕ್ಷದಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಸೋಮಶೇಖರ್ ಹೇಳಿಕೆ ಬಗ್ಗೆ ಅವರ ಜತೆಯೇ ಮಾತಾಡುತ್ತೇನೆ ಎಂದು ತಿಳಿಸಿದರು.

ಊಟದ ಸಮಯ, ಊಟಕ್ಕಾಗಿ ಸಿಎಂ ಯಡಿಯೂರಪ್ಪ ಅವರ  ಜೊತೆ ಬಂದಿದ್ದೇವೆ. ನಾಳೆ ಬಿಜೆಪಿ ಕಚೇರಿಗೆ ಬರುವಂತೆ ಹೇಳಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.ಈ ವೇಳೆ ಸಚಿವ ಸೋಮಣ್ಣ , ಆರ್ ಅಶೋಕ್, ಬಸವರಾಜ್ ಬೊಮ್ಮಾಯಿ ಭಾಗಿಯಾಗಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement

ದಾವಣಗೆರೆ

Advertisement
To Top