ಬೆಂಗಳೂರು: ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವರು, ‘ಪಕ್ಷದಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎನ್ನುವ ಸಿದ್ಧಾಂತವಿದ್ದು, ಇದರನ್ವಯ ನಾನು ಸಚಿವ ಸ್ಥಾನ ಅಲಂಕರಿಸಿದ್ದರಿಂದ ಪಕ್ಷದ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.
ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸಿದ ಅಧಿಯಲ್ಲಿ ತಮಗೆ ಸಲಹೆ ಸಹಕಾರ ನೀಡಿದ್ದಕ್ಕಾಗಿ ಧನ್ಯವಾದ ಎಂದಿದ್ದು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.



