Connect with us

Dvgsuddi Kannada | online news portal | Kannada news online

ಬಿಜೆಪಿ ನಾಯಕರಿಗೆ ತಾವು ಏನು ಮಾಡಿದರೂ ನಡೆಯುತ್ತಿದೆ ಎಂಬ ಮನಸ್ಥಿತಿ ಬಂದಿದೆ: ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ಬಿಜೆಪಿ ನಾಯಕರಿಗೆ ತಾವು ಏನು ಮಾಡಿದರೂ ನಡೆಯುತ್ತಿದೆ ಎಂಬ ಮನಸ್ಥಿತಿ ಬಂದಿದೆ: ಡಿ.ಕೆ. ಶಿವಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು :ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ಬಾಗಲಕೋಟೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಪ್ರತಿಕ್ರಿಯೆಸಿದರು.

ಇದು ಬಿಜೆಪಿಯ ಸಂಸ್ಕೃತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆದಿದೆ. ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾರ್ಪೊರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ. ಈ ಘಟನೆ ಪೊಲೀಸರ ಸಮ್ಮುಖದಲ್ಲೇ ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.

ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತೆ ಎಂದು ಕಾದು ನೋಡುತ್ತೇವೆ.  ನಂತರ ನಾವು ಮಾತನಾಡುತ್ತೇವೆ. ಈ ವಿಚಾರವನ್ನು ನಾನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡುತ್ತೇವೆ ಎಂದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top