ನವದೆಹಲಿ : ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಂಕಷ್ಟ ಎದುರಾಗಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಅವರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಇದರಿಂದಾಗಿ ಬಿಜೆಪಿ ಪಕ್ಷಕ್ಕೆ ಮುಜುಗರ ಕೂಡ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಉತ್ತರ ನೀಡುವಂತೆ ಸೂಚಿಸಲಾಗಿದೆ.



