Connect with us

Dvgsuddi Kannada | online news portal | Kannada news online

ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲ; ಮತ್ತೆ ಗುಡುಗಿದ ಯತ್ನಾಳ್

ಪ್ರಮುಖ ಸುದ್ದಿ

ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲ; ಮತ್ತೆ ಗುಡುಗಿದ ಯತ್ನಾಳ್

ಡಿವಿಜಿ ಸುದ್ದಿ, ವಿಜಯಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ.

ಯಡಿಯೂರಪ್ಪ ವಿರುದ್ಧ ಈ ಹಿಂದೆಯೂ ಯತ್ನಾಳ್ ಅಸಮಾಧಾನ ಹೊರ ಹಾಕಿದ್ದರು. ಇದಲ್ಲದೆ, ಇತ್ತೀಚೆಗೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕುರ್ಚಿಗೆ ಕುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಇದೇ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಯತ್ನಾಳ್ ಅವರು, ಬಿಎಸ್‍ವೈ ಸಿಎಂ ಆಗಿ ಬಹಳ ದಿನ ಉಳಿಯುವುದಿಲ್ಲ. ಕೇಂದ್ರ ಸರ್ಕಾರದವರಿಗೂ ಸಿಎಂ ಬಿಎಸ್‍ವೈ ಸಾಕಾಗಿ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗುತ್ತಾರೆ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ. ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ. ಜೊತೆಗೆ ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ಅವರು ನೀಡಿದ್ದಾರೆ ಎಂದರು.

ನನಗೂ ಹಾಗೂ ಸಿಎಂ ಯಡಿಯೂರಪ್ಪ ಅವರಿಗೂ ಜಗಳ ಶುರುವಾಗಿದೆ. ನನ್ನ ಮತಕ್ಷೇತ್ರದ 125 ಕೋಟಿ ಅನುದಾನವನ್ನು ಯಡಿಯೂರಪ್ಪ ಕಡಿತ ಮಾಡಿದ್ದರು. ಈ ವಿಚಾರದಲ್ಲಿ ಒಂದು ಬಾರಿ ಸಿಎಂ ವಿರುದ್ಧ ಜಗಳ ಆಗಿದೆ. ಇನ್ನೇನು ಬಿಎಸ್‍ವೈ ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದರು

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});