ಡಿವಿಜಿ ಸುದ್ದಿ, ಉಡುಪಿ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಲು ಕಾಂಗ್ರೆಸ್ ನಾಯಕರೇ ಕಾರಣ. ಆರ್.ಆರ್ ನಗರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸೋಲಿಸಿದ್ರೆ, ಶಿರಾದಲ್ಲಿ ಡಿ.ಕೆ ಶಿವಕುಮಾರ್ ಸೋಲಿಸಿದ್ರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ವೈಯಕ್ತಿಕ ಟೀಕೆ ನಡೆಸಿತು. ಸಿಎಂ ಯಡಿಯೂರಪ್ಪ ಮತ್ತು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದರು. ಮುಂದೆ ಎರಡು ವಿಧಾನಸಭೆ, ಒಂದು ಲೋಕಸಭಾ ಚುನಾವಣೆ ಬರುತ್ತದೆ. ಆ ಚುನಾವಣೆಯಲ್ಲೂ ಬಿಜೆಪಿ ನೂರಕ್ಕೆ ನೂರರಷ್ಟು ಗೆಲ್ಲಲಿದೆ ಎಂದರು.
ಕಾಂಗ್ರೆಸ್ ನಲ್ಲಿ ನಾನು ಬಂಡೆ, ನಾನು ಹುಲಿಯ ಅಂತ ಹೆಸರು ಇಟ್ಟುಕೊಂಡಿದ್ದಾರೆ. ತಾಲಿಬಾನಿಗಳು ಕೂಡಾ ಇದೇ ರೀತಿ ಹೆಸರು ಇಟ್ಟುಕೊಳ್ಳುತ್ತಾರೆ. ಬಂಡೆಯನ್ನು ಹುಲಿ ದೂಡಿ ಹಾಕಿದೆ. ಹುಲಿಯಾನನ್ನು ಬಂಡೆ ದುಡಿ ಹಾಕಿದೆ. ಇವತ್ತು ಹುಲಿಯೂ ಇಲ್ಲಾ, ಬಂಡೆಯೂ ಇಲ್ಲ.
ಸಿಎಂ ಸ್ಥಾನ ಬದಲಾಗುತ್ತೆ ಎಂದು ಜನರಲ್ಲಿ ಗೊಂದಲ ಸೃಷ್ಟಿ ಮಾಡಿದರು. ಬಿಜೆಪಿಯಲ್ಲಿ ಯಡಿಯೂರಪ್ಪ ನಾಯಕತ್ವ ಬದಲಾವಣೆಯ ಚರ್ಚೆಯೇ ಇಲ್ಲ. ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ನಮ್ಮ ನಾಯಕ ಎಂದರು.



