ಡಿವಿಜಿ ಸುದ್ದಿ, ಬೆಂಗಳೂರು: ದೆಹಲಿ ಪ್ರವಾಸದ ಬಳಿಕವಷ್ಟೇ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡ್ಮೂರು ದಿನದದಲ್ಲಿ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ಜೊತೆ ಮಾತನಾಡಿದ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
ಕಳೆದ ವಾರ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ನಂತರ, ಈ ಬಾರಿಯ ದೆಹಲಿ ಭೇಟಿ ಯಶಸ್ಸಿಯಾಗಿದ್ದು , ಹೈಕಮಾಂಡ್ ಒಪ್ಪಿಗೆ ನಂತರ ಸಂಪುಟ ವಿಸ್ತಣೆ ಮಾಡಲಾಗುವುದು ಎಂದಿದ್ದರು. ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವ ಆಸಕ್ತಿಯನ್ನು ಸಿಎಂ ಯಡಿಯೂರಪ್ಪ ಹೊಂದಿದ್ದರು.
ಯಡಿಯೂರಪ್ಪ ಅವರ ಆಸೆಗೆ ಹೈಕಮಾಂಡ್ ಸೂಚನೆ ನೀಡದ ಹಿನ್ನೆಲೆ ಹಾಗೂ ಇತ್ತೀಚೆಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಎರಡ್ಮೂರು ದಿನದಲ್ಲಿ ದೆಹಲಿ ಪ್ರವಾಸ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.



