ಡಿವಿಜಿ ಸುದ್ದಿ, ಬೆಂಗಳೂರು : 2 ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಆತ್ಮ ವಿಶ್ವಾಸದಲ್ಲಿರುವ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಹಾಲಿ ನಾಲ್ವರು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ.
ದೀಪಾವಳಿ ಹಬ್ಬದ ಬಳಿಕ ಸಚಿವ ಸಂಪುಟದಲ್ಲಿ ಆಗುವ ಸಾಧ್ಯತೆ ಇದ್ದು, ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಭಾರೀ ಬದಲಾವಣೆ ಆಗುವ ಸಾಶ್ಯತೆ ಇದೆ. ಈಗಿರುವ ನಾಲ್ವರು ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲು ಸಿಎಂ ಚಿಂತನೆ ನಡೆದಿದ್ದಾರೆ.
ಪ್ರಸ್ತುತ ಸಚಿವರಾಗಿರುವ ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ನಾಲ್ವರು ಸಚಿವರಿಗೆ ಕೋಕ್ ನೀಡಿ ಖಾಲಿ ಇರುವ ಏಳು ಸ್ಥಾನ ಸೇರಿ 10 ಮಂದಿ ಹೊಸಬರಿಗೆ ಅವಕಾಶ ಕೊಡಲಾಗುತ್ತಿದೆ. ಅಲ್ಲದೆ, ಎರಡು ಸಚಿವ ಸ್ಥಾನವನ್ನು ಖಾಲಿ ಉಳಿಸಿಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ. 2-3 ದಿನಗಳ ನಂತರ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಸಂಪುಟ ಪುನಾರಚನೆ ಹಾಗೂ ವಿಸ್ತರಣೆಗೆ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದರೆ, ಭೇಟಿಯ ನಂತರದ ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ ಆಗಲಿದೆ.



