Connect with us

Dvgsuddi Kannada | online news portal | Kannada news online

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ; ಎ.15ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ದಾವಣಗೆರೆ

ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ; ಎ.15ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಲೋಕಾಯುಕ್ತ ದಾಳಿಯ ಲಂಚ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಎ.15ಕ್ಕೆ ಆದೇಶ ಕಾಯ್ದಿರಿಸಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ವಿರೂಪಾಕ್ಷಪ್ಪ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿ ನಡೆಯಿತು. ಇನ್ನೂ ಪುತ್ರ ಪ್ರಶಾಂತ್ ಜಾಮೀನು ಅರ್ಜಿ ವಜಾಗೊಂಡಿದೆ. ಶಾಸಕ ಮಾಡಾಳ್ ಸೂಚನೆಯಂತೆ ಕಚೇರಿಯಲ್ಲಿ 40 ಲಕ್ಷ ರೂಪಾಯಿ ಲಂಚ ಪಡೆಯುವ ಸಿಕ್ಕಿ ಬಿದ್ದಿದ್ದ ಶಾಸಕರ ಪುತ್ರ ಪ್ರಶಾಂತ್ ಕುಮಾರ್ ಅವರಿಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರಾಕರಿಸಿದೆ.

ಮೂರನೆ ಆರೋಪಿ ಸುರೇಂದ್ರ ಅವರು ಪ್ರಶಾಂತ್ ಸೂಚನೆಯಂತೆ ವಾಹನದಲ್ಲಿ ಹಣ ಇಟ್ಟಿದ್ದಾರೆ ಎಂಬುದನ್ನು ಹೊರತುಪಡಿಸಿ ಅವರ ವಿರುದ್ಧ ಯಾವುದೇ ಆರೋಪವಿಲ್ಲ ಎಂದಿರುವ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top