Connect with us

Dvgsuddi Kannada | online news portal | Kannada news online

ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ :ಸಿಎಂ ಯಡಿಯೂರಪ್ಪ

ರಾಜ್ಯ ಸುದ್ದಿ

ಎರಡ್ಮೂರು ದಿನದಲ್ಲಿ ಸಂಪುಟ ವಿಸ್ತರಣೆ :ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ, ಮಾತುಕತೆ ನಡೆಸುತ್ತೇನೆ. ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿಯಲ್ಲಿ ಕೇಂದ್ರ ಗೃಹ ಸಚಿವರ ಅಮಿತ್ ಷಾ ಜತೆ ಮಾತನಾಡಿದ್ದು, ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ಪಟ್ಟಿ ಕಳುಹಿಸಿಕೊಡುವುದಾಗಿ ಹೇಳಿದ್ದು, ವಿಸ್ತರಣೆ ವಿಷಯ ಸುಗಮವಾಗಿ ಬಗೆಹರಿಯಲಿದ್ದು, ಸಿಹಿಸುದ್ದಿ ದೊರಕಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸುವ ಬಗ್ಗೆ ವಿಚಾರ ಇಂದು ಯಾವುದೇ ತೀರ್ಮಾನ ಮಾಡುವುದಿಲ್ಲ. ಲಿಂಗಾಯಿತರನ್ನು ಬಗ್ಗೆ ಓಬಿಸಿಗೆ ಸೇರಿಸಲು ನಿರ್ಧರಿಸಿದ್ದೆವು.ಆದರೆ ದೆಹಲಿಗೆ ಹೋಗಿ ಪ್ರಮುಖರು ಹಾಗೂ ತಜ್ಞರ ಜೊತೆ ಚರ್ಚಿಸಿದ ಬಳಿಕ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಅಲ್ಲಿಯವರೆಗೆ ಯಾವುದೇ ಆತುರದ ತೀರ್ಮಾನ ಕೈಗೊಳ್ಳದಂತೆ ಸಂಪುಟ ಸಹೋದ್ಯೋಗಿಗಳು ಸಲಹೆ ಮಾಡಿದ್ದಾರೆ.ಹಾಗಾಗಿ ದೆಹಲಿಗೆ ಹೋಗಿ ಬಂದ ಬಳಿಕವಷ್ಟೇ ಲಿಂಗಾಯತ ಮೀಸಲಾತಿ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ.ಮೀಸಲಾತಿ ಸಂಬಂಧ ತಜ್ಞರ ಸಮಿತಿ ರಚನೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top