ಡಿವಿಜಿ ಸುದ್ದಿ, ಬೆಂಗಳೂರು: ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ನವದೆಹಲಿಯಲ್ಲಿ ರಾತ್ರಿ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆ ದೂರದ ಮಾತು ಎಂದರು. ಯಡಿಯೂರಪ್ಪ ದೆಹಲಿಗೆ ತೆರಳಿದ ಬೆನ್ನಲ್ಲೇ ನಾಯಕತ್ವ ಬದಲಾವಣೆ ಸುದ್ದಿ ರಾಜ್ಯದಲ್ಲಿ ಹರಿದಾಡುತ್ತಿತ್ತು.
ಮುಖ್ಯಮಂತ್ರಿಯಾಗಿ ಒಂದು ವರ್ಷ ಆಗಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ಬಿಡಲು ವರಿಷ್ಠರು ಸೂಚಿಸಲಿದ್ದಾರೆ ಎಂದು ಚರ್ಚಿಸಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅವಧಿಪೂರ್ಣಗೊಳ್ಳಿಸುವ ಸೂಚನೆ ಸಿಕ್ಕಿದೆ ಎಂದರು.



