ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಯಲ್ಲಿ ಭಾಷೆಗೆ ಆದ್ಯತೆ ನೀಡಿಲ್ಲ. ಮರಾಠ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಸ್ಥಾಪನೆ ಮಾಡಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರಾಠ ಅಭಿವೃದ್ಧಿ ನಿಗಮವನ್ನು ಚುನಾವಣೆ ದೃಷ್ಠಿಯಿಂದ ಮಾಡಿಲ್ಲ. ಇಲ್ಲಿ ಮರಾಠ ಭಾಷೆಗೆ ಆದ್ಯತೆ ನೀಡಿಲ್ಲ. ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಮರಾಠ ಜನಾಂಗದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಲಾಗಿದೆ ಎಂದರು.
ಈಗಾಗಲೇ ವಾಲ್ಮೀಕಿ ನಿಗಮ, ಅಂಬೇಡ್ಕರ್ ನಿಗಮ ಹೀಗೆ ಅನೇಕ ನಿಗಮಗಳಿವೆ. ಅದೇ ರೀತಿ ಮರಾಠ ಸಮುದಾಯ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಸ್ಥಾಪನೆ ಮಾಡಿದೆ. ಇದರಿಂದ ರಾಜ್ಯದಲ್ಲಿರುವ ಮರಾಠ ಸಮುದಾಯದವರಿಗೆ ಅನುಕೂಲವಾಗಲಿದೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.



