ದಾವಣಗೆರೆ: ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಆಡಳಿತಯಂತ್ರ ಕುಸಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಆಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಕುರುಬ ವಿದ್ಯಾವರ್ಧಕ ಸಂಘದ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರಿಗೆ ಸರ್ಕಾರದ ಮೇಲೆ ವಿಶ್ವಾಸವಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಇದನ್ನು ನಾವು ಹೇಳುತ್ತಿಲ್ಲ ಆಡಳಿತ ಪಕ್ಷದ ಸದಸ್ಯರೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹೀಗಾಗಿ ಈ ಸರ್ಕಾರದಲ್ಲಿ ಯಾವುದು ಸರಿಯಲ್ಲ ಎಂಬುದು ಗೊತ್ತಾಗುತ್ತದೆ ಎಂದರು.
ನಾವು ಸರ್ಕಾರದ ವಿರುದ್ಧ ಮಾತನಾಡಿದ್ರೆ, ವಿರೋಧ ಪಕ್ಷ ಆರೋಪ ಎನ್ನುತ್ತಾರೆ. ಆದರೆ, ಆಡಳತ ಪಕ್ಷದವರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಇದಕ್ಕೆ ಈಶ್ವರಪ್ಪ ರಾಜ್ಯ ಪಾಲರಿಗೆ ಬರೆದಿರುವ ಪತ್ರವೇ ಸಾಕ್ಷಿ. ಹೀಗಾಗಿ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದರು.



