Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ: ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿ: ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ:  ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಆಡಳಿತಯಂತ್ರ  ಕುಸಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಆಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಕುರುಬ ವಿದ್ಯಾವರ್ಧಕ ಸಂಘದ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರಿಗೆ ಸರ್ಕಾರದ ಮೇಲೆ ವಿಶ್ವಾಸವಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಇದನ್ನು ನಾವು ಹೇಳುತ್ತಿಲ್ಲ ಆಡಳಿತ ಪಕ್ಷದ ಸದಸ್ಯರೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಹೀಗಾಗಿ ಈ ಸರ್ಕಾರದಲ್ಲಿ ಯಾವುದು ಸರಿಯಲ್ಲ ಎಂಬುದು ಗೊತ್ತಾಗುತ್ತದೆ ಎಂದರು.

ನಾವು ಸರ್ಕಾರದ ವಿರುದ್ಧ ಮಾತನಾಡಿದ್ರೆ, ವಿರೋಧ ಪಕ್ಷ ಆರೋಪ ಎನ್ನುತ್ತಾರೆ. ಆದರೆ, ಆಡಳತ ಪಕ್ಷದವರೇ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದಾರೆ. ಇದಕ್ಕೆ ಈಶ್ವರಪ್ಪ ರಾಜ್ಯ ಪಾಲರಿಗೆ ಬರೆದಿರುವ ಪತ್ರವೇ ಸಾಕ್ಷಿ. ಹೀಗಾಗಿ ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top