ನವದೆಹಲಿ: ದೆಹಲಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ "ಕರ್ನಾಟಕ ಭವನ-1 ಕಾವೇರಿ" ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಮಾನ್ಯ ಮುಖ್ಯಮಂತ್ರಿ @BSYBJP ರವರು ಇಂದು ಚಾಲನೆ ನೀಡಿದರು. (1/2) pic.twitter.com/wD4a0zcCAs
— CM of Karnataka (@CMofKarnataka) September 18, 2020
ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ರಾಜ್ಯದ ಬಗ್ಗೆ ಚರ್ಚೆ ಮಾಡಲಿದ್ದೇನೆ. ರಾಜ್ಯದ ಬಾಕಿ ಯೋಜನೆಗೆ ಅನುದಾನ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಎರಡು ತಳ ಮಹಡಿ, ನೆಲ ಮಹಡಿ ಹಾಗೂ ಆರು ಮಹಡಿ ಒಳಗೊಂಡಂತೆ ಒಟ್ಟು ಒಂಭತ್ತು ಮಹಡಿಗಳ ಈ ಕಟ್ಟಡವನ್ನು ನಿರ್ಮಾಣಕ್ಕೆ ಬಾಲಾಜಿ ಕೃಪಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್‍ಗೆ ನೀಡಿದೆ. ಮುಂದಿನ 24 ತಿಂಗಳಲ್ಲಿ ಕಟ್ಟಡದ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.



