ಡಿವಿಜಿ ಸುದ್ದಿ, ಕಲಬುರ್ಗಿ: ಬರೀ ಮೋದಿಯ ಬಗ್ಗೆ ತಪ್ಪು ಹುಡುಕುವುದೇ ನನ್ನ ಕೆಲಸವಲ್ಲ. ಎಲ್ಲವನ್ನೂ ಗಮನಿಸುತ್ತಿದ್ದೇನೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಕಾಳಗ ನಡೆದಿದೆ. ಕೊರೊನಾ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿವೆ. ಪಕ್ಷ ಸಂಘಟನೆ ಮಾಡುವುದೇ ನನ್ನ ಕೆಲಸ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಿಮ್ಮಯ್ಯ ಪುರ್ಲೆ ನಾಮಪತ್ರ ಸಲ್ಲಿಕೆಯಲ್ಲಿ ಮುನ್ನ ಮಾತನಾಡಿದ ಅವರು, ಆರ್ಥಿಕವಾಗಿ ದೇಶ ಸಂಕಷ್ಟಕ್ಕೆ ಗುರಿಯಾಗಿದೆ. ಇದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ತಲೆದೋರಿದ ಸಮಸ್ಯೆಗಳೂ ಕಾರಣವಾಗಿದೆ ಕೊರೊನಾ ಸೋಂಕು ಕೂಡ ಕಾರಣ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರಾದ ಬಂಡೆಪ್ಪ ಕಾಶೆಂಪೂರ, ನಾಗನಗೌಡ ಕಂದಕೂರ, ಮುಖಂಡರಾದ ಬೋಜೇಗೌಡ, ಶ್ರೀಕಂಠೇಗೌಡ, ಜಿಲ್ಲಾ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಇದ್ದರು.