Connect with us

Dvgsuddi Kannada | online news portal | Kannada news online

ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು

ಪ್ರಮುಖ ಸುದ್ದಿ

ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು

ಡಿವಿಜಿ ಸುದ್ದಿ, ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.

ಡಿಕೆಶಿ ಮನೆ, ಕಚೇರಿ ಸೇರಿದಂತೆ 15 ಕಡೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ಇದೀಗ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಡಿ. ಕೆ. ಶಿವಕುಮಾರ್ ವಿರುದ್ಧ ಎಫ್‍ಆರ್ ದಾಖಲಿಸಿಕೊಂಡಿದ್ದಾರೆ. ಮಿತಿ ಮೀರಿದ ಆಸ್ತಿ ಗಳಿಕೆ  ಆರೋಪದ ಮೇಲೆ ಈ ಎಫ್‍ಐಆರ್ ದಾಖಲಾಗಿದೆ.

ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ  ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿ ಜೈಲು ಸೇರಿದ್ದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top