ಡಿವಿಜಿ ಸುದ್ದಿ, ಬೆಂಗಳೂರು: ಅಕ್ರಮ ಹಣ ವರ್ಗಾವಣೆಗೆ ಸಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸ, ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ್ದು, ಈ ದಾಳಿಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಇದೊಂದು ಬಿಜೆಪಿಯ ಪ್ರತೀಕಾರದ ರಾಜಕೀಯ ಕಿಡಿಕಾರಿದ್ದಾರೆ.
ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು, ಬಿಜೆಪಿ ಪ್ರತೀಕಾರದ ರಾಜಕೀಯದಲ್ಲಿ ನಿರತವಾಗಿದೆ. ಈ ಮೂಲಕ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಡಿಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಇವತ್ತಿನ ಸಿಬಿಐ ದಾಳಿಯು ಉಪಚುನಾವಣೆಯಲ್ಲಿನ ನಮ್ಮ ಸಿದ್ಧತೆಯನ್ನು ಹಳಿ ತಪ್ಪಿಸುವ ಮತ್ತೊಂದು ಪ್ರಯತ್ನವಾಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
.@BJP4India has always tried to indulge in vindictive politics & mislead public attention.
The latest CBI raid on @KPCCPresident @DKShivakumar's house is another attempt to derail our preparation for bypolls.
I strongly condemn this.
— Siddaramaiah (@siddaramaiah) October 5, 2020



