ದಾವಣಗೆರೆ: ಸಚಿವ ಸಂಪಟ ವಿಸ್ತರಣೆ ಹಿನ್ನೆಲೆ ವಿಜಯೇಂದ್ರಗೆ ಮಂತ್ರಿ ಸ್ಥಾನ ನೀಡುವ ಬಗ್ಗೆ ಕೇಂದ್ರದ ನಾಯಕರು ಮತ್ತು ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲವನ್ನು ನಾವು ಕೇಳಿದ್ದೇವೆ. ಕುಮಾರ ಸ್ವಾಮಿ ಅವರು ಬೆಂಬಲ ನೀಡುವುದು ಜಿಲ್ಲೆಯ ಕಾರ್ಯಕರ್ತರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ. ಇದು ಸಂತೋಷದ ವಿಚಾರ. ಕುಮಾರಸ್ವಾಮಿ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.
ಎಲ್ಲಿ ಜೆಡಿಎಸ್ ಅಭ್ಯರ್ಥಿಗಳಿಲ್ಲವೋ, ಅಲ್ಲಿ ಬಿಜೆಪಿಗೆ ಸಹಜವಾಗಿ ಸಹಕಾರ ನೀಡಲಿದ್ದಾರೆ. ಸ್ಥಳೀಯ ನಾಯಕರು ಬಿಜೆಪಿಗೆ ಬೆಂಬಲಿಸುತ್ತಾರೆ ಅನ್ನೋ ವಿಶ್ವಾಸ ಇದೆ. ಎಲ್ಲಿ ಕಾಂಗ್ರೆಸ್ ಪ್ರಭಾವ ಜಾಸ್ತಿ ಇದೆ ಅಲ್ಲಿ ಜೆಡಿಎಸ್ ಬೆಂಬಲ ಕೊಡುತ್ತಾರೆ ಎನ್ನುವ ನಂಬಿಕೆ ಇದೆ ಎಂದರು.



