Connect with us

Dvgsuddi Kannada | online news portal | Kannada news online

ಉಪ ಚುನಾವಣೆಯ ನನ್ನ ಸೋಲಿಗೆ ಸಿ.ಪಿ ಯೋಗೇಶ್ವರ್, ಸಂತೋಷ್ ಕಾರಣ; ವಿಶ್ವನಾಥ್ ಕಿಡಿ

ರಾಜಕೀಯ

ಉಪ ಚುನಾವಣೆಯ ನನ್ನ ಸೋಲಿಗೆ ಸಿ.ಪಿ ಯೋಗೇಶ್ವರ್, ಸಂತೋಷ್ ಕಾರಣ; ವಿಶ್ವನಾಥ್ ಕಿಡಿ

ಬೆಂಗಳೂರುಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಣಸೂರು ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದಿಂದ ಚುನಾವಣಾ ಖರ್ಚಿಗಾಗಿ ನೀಡಿದ ಹಣವನ್ನು ಸಿ.ಪಿ. ಯೋಗೀಶ್ವರ್ ಹಾಗೂ ಎನ್.ಆರ್ ಸಂತೋಷ್ ಲಪಟಾಯಿಸಿದರು. ಉಪ ಚುನಾವಣೆ ಅಭ್ಯರ್ಥಿ ಘೋಷಣೆಗೂ ಮುನ್ನವೇ ತಾನೆ ಅಭ್ಯರ್ಥಿ ಎಂದು ಎಲ್ಲೆಡೆ ಫ್ಲೆಕ್, ಬ್ಯಾನರ್ ಹಾಕಿಹೊಂಡು ಪ್ರಚಾರ ಮಾಡಿದರು. ಸೀರೆ, ಕುಕ್ಕರ್ ನೀಡಿದರು. ಅದರೂ ಸಹ ಬಹಿರಂಗವಾಗಿಯೇ ನಡೆಸಿ ಸಿಕ್ಕಿಬಿದ್ದರು. ಮಾಧ್ಯಮಗಳಲ್ಲಿಯೂ ಇದು ಭಾರೀ ಸುದ್ದಿಯಾಗಿತ್ತು. ಹೀಗಾಗಿ ನನ್ನ ಸೋಲಿಗೆ ಇದೂ ಕಾರಣವಾಗಿದೆ. ಅಂತಹವರನ್ನು ಮುಖ್ಯಮಂತ್ರಿಯವರು ಮಂತ್ರಿ ಮಾಡುತ್ತೇನೆ ಎಂದು ಹೇಳಿಕೆ ನೀಡಿದರೆ ಹೇಗೆ ಎಂದು ಪ್ರಶ್ನಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಲಿಖಿತವಾಗಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ನನಗೆ ತುಂಬಾ ಬೇಸರವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top