Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ರಾಜಕೀಯ

ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಡಿವಿಜಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ  ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಮೈತ್ರಿ ವಿಚಾರದಲ್ಲಿ ಜೆಡಿಎಸ್‌ ಅನ್ನು ಉಲ್ಲೇಖಿಸಿದ್ದಕ್ಕೆ ಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮಾಡಿ ಕಿಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ,ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಅವರು ಹೇಳಿದ್ದಾರೆ.

ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top