Connect with us

Dvgsuddi Kannada | online news portal | Kannada news online

ರೈತ ಪ್ರತಿಭಟನೆ; ತೆರೆಮರೆಯಲ್ಲಿ ಕಾಂಗ್ರೆಸ್ ರಾಜಕಾರಣ: ಎಚ್.ಡಿ. ಕುಮಾರಸ್ವಾಮಿ

ಪ್ರಮುಖ ಸುದ್ದಿ

ರೈತ ಪ್ರತಿಭಟನೆ; ತೆರೆಮರೆಯಲ್ಲಿ ಕಾಂಗ್ರೆಸ್ ರಾಜಕಾರಣ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ಭೂಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟರ್ ಮಾಡಿದ ಅವರು,  ಕಾಂಗ್ರೆಸ್‌ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜೆಡಿಎಸ್‌ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ. ಅವರ ಮೂಲಕ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಈ ಮೂಲಕ ಕಾಂಗ್ರೆಸ್‌ ರೈತ ಸಂಘಗಳನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದರು.

ರೈತ ಸಂಘಗಳು ರೈತರಿಗಾಗಿ ಹೋರಾಡುವುದನ್ನು ಬಿಟ್ಟು  ಸಮಾಜವನ್ನು ಒಡೆಯುವ, ಜನರ ಆಶಯಗಳಿಗೆ ವಿರುದ್ಧವಾದ ಚಿಂತನೆಗಳನ್ನು ಹೊಂದಿರುವ ಪಕ್ಷದ ಪರವಾಗಿ ಕೆಲಸ ಮಾಡುತ್ತಿವೆ. ಭೂ ಸುಧಾರಣೆ ಕಾಯ್ದೆ ವಿಚಾರವಾಗಿ ಅನಗತ್ಯ ಹೋರಾಟ ನಡೆಸುತ್ತಿರುವ ಕೆಲ ರೈತ ಸಂಘಗಳ ಹಿಂದೆ ಕಾಂಗ್ರೆಸ್‌ ತೆರೆಮರೆಯ ರಾಜಕಾರಣ ಮಾಡುತ್ತಿದೆ ಆರೋಪಿಸಿದರು.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top