ಶಿವಮೊಗ್ಗ: ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತಿ ಚುನಾವಣೆ ಒಳಗೆ ನಿರ್ಧಾರ ಕೈಗೊಳ್ಳುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹುಟ್ಟುಹಬ್ಬದ ದಿನದಿಂದಲೇ ಈ ಬದಲಾವಣೆ ಶುರುವಾಗಲಿದೆ. ಜಿಲ್ಲಾ ಪಂಚಾಯಿತಿ ಚುನಾವಣೆಯೊಳಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಚುನಾವಣೆ ಬಂದಾಗ ಪಕ್ಷ ಬದಲಾವಣೆ ಮಾಡುವುದು ತಪ್ಪ, ಅದಕ್ಕೂ ಮುಂಚೆ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಸುಳಿವು ನೀಡಿದ್ದಾರೆ. ಹುಟ್ಟು ಹಬ್ಬಕ್ಕೆ ಶುಭಾಶಯಕೋರಲು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು.



