ವಿಜಯಪುರ: ಕಾಂಗ್ರೆಸ್ ಪಕ್ಷವೇ ಕ್ರಾಸ್ ಬ್ರೀಡ್, ಸಿದ್ದರಾಮಯ್ಯ ಆ ಪಕ್ಷ ಸೇರಿರುವುದರಿಂದ ಅವರ ಮೇಲೂ ಅನುಮಾನವಿದೆ. ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಹೇಳಿಕೆ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ ಯತ್ನಾಳ್, ಪ್ರಕರಣದ ಹಿಂದೆ ದೊಡ್ಡ ಕಥೆಯಿದೆ ಎಂದಿದ್ದಾರೆ. ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ. ಈ ಬಗ್ಗೆ ಕಾಲ ಬಂದಾಗ ಹೇಳುತ್ತೇನೆ ಎಂದು ತಿಳಿಸಿದ್ದಾರೆ.



