ಡಿವಿಜಿ ಸುದ್ದಿ, ಮಂಗಳೂರು: ಉಪ ಚುನಾವಣೆ ಫಲಿತಾಂಶ ಬಂದ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಶೀಘ್ರವೇ ದೆಹಲಿಗೆ ಹೋಗುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶೀಘ್ರವೇ ದೆಹಲಿಗೆ ಹೋಗಲಾಗುತ್ತೇನೆ. ಹೈಕಮಾಂಡ್ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು.



