Connect with us

Dvgsuddi Kannada | online news portal | Kannada news online

ಮುಂದಿನ ಎರಡೂವರೆ ವರ್ಷ ನಾನೇ ಸಿಎಂ; ಬದಲಾವಣೆ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ

ಪ್ರಮುಖ ಸುದ್ದಿ

ಮುಂದಿನ ಎರಡೂವರೆ ವರ್ಷ ನಾನೇ ಸಿಎಂ; ಬದಲಾವಣೆ ಹೇಳಿಕೆಗೆ ತಿರುಗೇಟು ನೀಡಿದ ಯಡಿಯೂರಪ್ಪ

ಬೆಂಗಳೂರು: ಮುಂದಿನ ಎರಡೂವರೆ ವರ್ಷ ನಾನೇ ಸಿಎಂ. ಒಂದೂವರೆ ವರ್ಷ ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ವಹಿಸಿದ್ದೇನೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಹ  ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಮುಂದಿನ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ. ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎನ್ನುವ ಮಾತುಗಳಿಗೆ ತಿರುಗೇಟು ನೀಡಿದರು.

ನಾಯಕತ್ವ ಗೊಂದಲ ಕೇವಲ ಮಾಧ್ಯಮ ಸೃಷ್ಟಿ. ಒಂದೆರಡು ಶಾಸಕರಲ್ಲಿ ಬೇಸರ ಇರಬಹುದು, ಅವರ ಬಳಿ ಮಾತನಾಡಿ ಸರಿಪಡಿಸಲಾಗುವುದು. ಅದಕ್ಕಾಗಿಯೇ ಸಭೆ ಕರೆದಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಇಂದು ನಿಷೇಧಾಜ್ಞೆ : ಕೊರೊನಾ ವೈರಸ್ ಹಿನ್ನೆಲೆ ಈ ಬಾರಿಯ  ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಲ್ಲಿ  ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೆ  ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಜನರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ . ಕೋವಿಡ್ ಕಾರ್ಯಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top