Connect with us

Dvgsuddi Kannada | online news portal | Kannada news online

Breaking news: ಇತ್ತೀಚೆಗೆ ಆಯ್ಕೆಯಾದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್ ..!

ಪ್ರಮುಖ ಸುದ್ದಿ

Breaking news: ಇತ್ತೀಚೆಗೆ ಆಯ್ಕೆಯಾದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್ ..!

ಬೆಂಗಳೂರು: ಇತ್ತೀಚೆಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಆದೇಶವನ್ನ  ಹೈಕೋರ್ಟ್  ರದ್ದು ಮಾಡಿದೆ. ಇದರಿಂದ ಇತ್ತೀಚೆಗೆ ಆಯ್ಕೆಯಾದ ನೂತನ ಅಧ್ಯಕ್ಷ, ಉಪಾಧ್ಯಕ್ಷರು ತಮ್ಮ ಸ್ಥಾನ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಅ.8ರಂದು ಸರ್ಕಾರ ಹೊರಡಿಸಿದ್ದ  ಅಧಿಸೂಚನೆ ಪ್ರಶ್ನಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ಕೊಡಗು ಜಿಲ್ಲೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸೇರಿ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಸರ್ಕಾರದ ಆದೇಶ ರದ್ದುಗೊಳಿಸಿದೆ.

ಮೀಸಲು ಕಲ್ಪಿಸುವ ವೇಳೆ ರೊಟೇಷನ್ ನಿಯಮ ಪಾಲನೆಯಾಗಿಲ್ಲ. ಆದ್ದರಿಂದ, ನಾಲ್ಕು ವಾರಗಳ ಒಳಗೆ ರೊಟೇಷನ್ ಪದ್ಧತಿ ಅನುಸಾರ ಮೀಸಲಾತಿ ಕಲ್ಪಿಸಿ ಮರು ಅಧಿಸೂಚನೆ ಹೊರಡಿಸಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್, ಇತ್ತೀಚೆಗಷ್ಟೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆಯಾಗಿದ್ದವರಿಗೆ ಶಾಕ್  ನೀಡಿದೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top