ಚಾಮರಾಜನಗರ : ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಸ್ವಪಕ್ಷದವರಿಂದಲೇ ಕೈ ತಪ್ಪಿದೆ ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಪಕ್ಷವನ್ನು ಹಿಂದೂ ಧರ್ಮ ವಿರೋಧಿ ಎನ್ನಲಾಗುತ್ತಿದೆ. ರಾಜಕಾರಣವೇ ಬೇರೆ, ಹಿಂದುತ್ವವೇ ಬೇರೆ. ಕಾಂಗ್ರೆಸ್ ಹಿಂದುತ್ವದ ವಿರೋಧಿಯೇ ಹೊರತು, ಹಿಂದು ಧರ್ಮದ ವಿರೋಧಿಯಲ್ಲ ಎಂದರು.
ಮೇಯರ್ ಚುನಾವಣೆಯಲ್ಲಿ ಒಬ್ಬ ನಾಯಕರಿಗೆ ಹಿನ್ನಡೆ ಉಂಟು ಮಾಡಬೇಕೆಂದು ಸ್ವಪಕ್ಷದವರೇ ಮೇಯರ್ ಸ್ಥಾನವನ್ನು ಬೇರೆ ಪಕ್ಷಕ್ಕೆ ಬಿಟ್ಟುಕೊಟ್ಟರು ಎಂದು ಅಸಮಾಧಾನ ಹೊರಹಾಕಿದ್ದಾರೆ.



