ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ರಾಜ್ಯದಿಂದ ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್ ನಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ರಾಜ್ಯಸಭೆ ಅಭ್ಯರ್ಥಿಗಳಾಗಿ ನಟ ನವರಸ ನಾಯಕ ಜಗ್ಗೇಶ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್ ನೀಡಲಾಗಿದೆ. ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಕರ್ನಾಟಕದಿಂದ ಸ್ಪರ್ಧೆಗೆ ಅವಕಾಶ ಸಿಕ್ಕಿದೆ. ಮೂರನೇ ಅಭ್ಯರ್ಥಿಯನ್ನು ಬಿಜೆಪಿ ನಿಲ್ಲಿಸುವುದು ಪಕ್ಕಾ ಆಗಿದೆ.



